×
Ad

ಗಂಗಾವತಿ: ಕುತೂಹಲ ಮೂಡಿಸಿದ ಕಾಂಗ್ರೆಸ್‌ ಟಿಕೆಟ್ ವಂಚಿತ ಎಚ್‌.ಆರ್‌. ಶ್ರೀನಾಥ್‌- ಜನಾರ್ದನ ರೆಡ್ಡಿ ಭೇಟಿ

Update: 2023-04-09 14:42 IST

ಗಂಗಾವತಿ: ಮುಂಬರುವ ವಿಧಾನಸಭೆ ಚುನಾವಣೆಗೆ ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ವಂಚಿತರಾಗಿರುವ ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ್‌ ಅವರನ್ನು 'ಕಲ್ಯಾಣ ರಾಜ್ಯ ಪ್ರಗತಿ' ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. 

ಶನಿವಾರ ಶ್ರೀನಾಥ್‌ ಮೆನೆಗೆ ಭೇಟಿ ನೀಡಿದ ಜನಾರ್ದನ ರೆಡ್ಡಿ ಶ್ರೀನಾಥ್‌ ಜೊತೆ ಕೆಲಹೊತ್ತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಶ್ರೀನಾಥ್‌ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

Similar News