×
Ad

ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬೆಂಬಲಿಗರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಗೆ ಮುತ್ತಿಗೆ

ಶಿಗ್ಗಾಂವ್ ಕ್ಷೇತ್ರದ ಟಿಕೆಟ್ ನೀಡುವಂತೆ ಪಟ್ಟು

Update: 2023-04-09 15:33 IST

ಹಾವೇರಿ: ಟಿಕೆಟ್ ವಂಚಿತರಾದ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಲು ಹಾವೇರಿ ಜಿಲ್ಲಾ ಕಾಂಗ್ರೆಸ್  ಕಚೇರಿಗೆ ಆಗಮಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರಿಗೆ ಶಿಗ್ಗಾಂವ್ ಕ್ಷೇತ್ರದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾದ ಶಿಗ್ಗಾಂವ್ ಗೆ  ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲೂ ಅಭ್ಯರ್ಥಿ ಘೋಷಣೆ ಆಗಿಲ್ಲ. ಅಭ್ಯರ್ಥಿ ಘೋಷಣೆ ವಿಳಂಬಕ್ಕೆ ಕಾರ್ಯಕರ್ತರಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.  

ಕಳೆದ ಬಾರಿ ಬೊಮ್ಮಾಯಿ ಎದುರು ಸ್ಪರ್ಧಿಸಿ ಸೋತಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಇಲ್ಲಿಂದ ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದ್ದರಿಂದ ಖಾದ್ರಿ ಅವರಿಗೇ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಸಲೀಂ ಅಹ್ಮದ್ ಅವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶಿಗ್ಗಾಂವ್ ಅನ್ನು ಹರಿವಾಣದಲ್ಲಿಟ್ಟು ಬೊಮ್ಮಾಯಿಗೆ ಕೊಡುತ್ತಾ ಕಾಂಗ್ರೆಸ್?

Similar News