ಕಲಘಟಗಿ: ಟಿಕೆಟ್ ವಂಚಿತ ನಾಗರಾಜ ಛಬ್ಬಿ ಕಾಂಗ್ರೆಸ್ ಗೆ ರಾಜೀನಾಮೆ
Update: 2023-04-09 17:30 IST
ಕಲಘಟಗಿ: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರವಿವಾರ ರಾಜೀನಾಮೆ ನೀಡಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, 'ಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದನೆ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾಗರಾಜ ಛಬ್ಬಿ ಕಲಘಟಗಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇಲ್ಲಿ ಮಾಜಿ ಸಚಿವ ಸಂತೋಷ್ ಲಾಡ್‌ಗೆ ಕೆಪಿಸಿಸಿ ಮಣೆ ಹಾಕಿದೆ. ಇದರಿಂದ ಮುನಿಸಿಕೊಂಡಿರುವ ಛಬ್ಬಿ ರಾಜೀನಾಮೆ ನೀಡಿದ್ದಾರೆ.