PSI ಹಗರಣ: 145 ಮಂದಿ ಅರ್ಜಿದಾರರೂ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ವರದಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

Update: 2023-04-10 16:21 GMT

ಬೆಂಗಳೂರು, ಎ.10: ಪೊಲೀಸ್ ಸಬ್ ಇನ್‍ಸ್ಪೆಕ್ಟರ್(ಪಿಎಸ್ಸೈ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ, ಹಾಲಿ ಅರ್ಜಿದಾರರಾಗಿರುವ 145 ಮಂದಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 

ಪಿಎಸ್ಸೈ ಪರೀಕ್ಷಾ ಅಕ್ರಮ ನಡೆದಿರುವ ಸಂಬಂಧ ಮರು ಪರೀಕ್ಷೆಗೆ ಆದೇಶಿಸಿದ್ದ ಕ್ರಮವನ್ನು ಪ್ರಶ್ನಿಸಿ ಕೋಲಾರದ ಚಂದನ್ ಸೇರಿದಂತೆ 145 ಮಂದಿ ಪ್ರತ್ಯೇಕವಾಗಿ ಸಲ್ಲಿಸಿರುವ ಒಟ್ಟು ಆರು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ನಡೆಸಿತು. 

ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ, ಕೋರ್ಟ್ ಮೆಟ್ಟಿಲೇರಿರುವ 145 ಮಂದಿ ಅರ್ಜಿದಾರ ಅಭ್ಯರ್ಥಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಜೂ.15ರೊಳಗೆ ರಾಜ್ಯ ಸರಕಾರ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠವು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. 
 

Similar News