×
Ad

ಮುಂಬೈ: ಮೊಬೈಲ್ ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೈದ ಬಾಲಕಿ

Update: 2023-04-11 11:58 IST

ಮುಂಬೈ: ಮೊಬೈಲ್ ನೋಡಲು ಬಿಡಲಿಲ್ಲ ಎಂದು ಮನ ನೊಂದ 15 ವರ್ಷದ ಬಾಲಕಿಯೊಬ್ಬಳು ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲಾಡ್‌ನ ಉಪನಗರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ  ಆಕೆ ಅಸಮಾಧಾ.ನಗೊಂಡಿದ್ದಳು ಎಂದು ಪೊಲೀಸರು ಶಂಕಿಸಿದ್ದಾರೆ, ತನಿಖೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Similar News