×
Ad

ಟಿಕೆಟ್ ಹಂಚಿಕೆಯ ಸಭೆಯಲ್ಲಿ ಬಿಎಸ್ ವೈ ಹೊರಗಿಟ್ಟು ಸಭೆ ನಡಸಿದ ಬಿಜೆಪಿ ವರಿಷ್ಠರು: ಕಾಂಗ್ರೆಸ್ ಆರೋಪ

Update: 2023-04-11 13:24 IST

ಬೆಂಗಳೂರು: ಬಿಜೆಪಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇರಬೇಕಾದ ಜಾಗದಲ್ಲಿ ಪ್ರಯತ್ನಪೂರ್ವಕವಾಗಿ ಪ್ರಹ್ಲಾದ್ ಜೋಷಿಯನ್ನು ತಂದು ಕೂರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  'ಟಿಕೆಟ್ ಹಂಚಿಕೆಯ ಸಭೆಯಲ್ಲಿ ಬಿಎಸ್ ವೈ ಮಾತಿಗೆ ಮನ್ನಣೆ ಕೊಡುವುದಿರಲಿ ಕನಿಷ್ಠ ಹಾಜರಿಗೂ ಅವಕಾಶ ಕೊಡಲಿಲ್ಲ. ಬಿಎಸ್ ವೈಗೆ ನಿರಂತರ ಅವಮಾನ ಮಾಡಿದ ಬಿಜೆಪಿ ಅವರನ್ನು ಡಸ್ಟ್‌ಬಿನ್‌ನಲ್ಲಿ ಬಿದ್ದಿರುವ ಕಸದಂತೆ ನಡೆಸಿಕೊಳ್ಳುತ್ತಿದೆ' ಎಂದು ದೂರಿದೆ. 

''ಬಿಜೆಪಿಗೆ ಯಡಿಯೂರಪ್ಪ ಬೇಕಿರುವುದು ಓಟು ಗಳಿಕೆಗೆ ಮುಖ ತೋರಿಸಲು ಮಾತ್ರ! ಟಿಕೆಟ್ ಹಂಚಿಕೆಯ ಸಭೆಗೆ ಮಾತ್ರ ಬಿಎಸ್ ವೈ ಹೊರಗೆ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಸಿ.ಟಿ.ರವಿ, ಕಟೀಲು ಒಳಗೆ! ಬಿಎಸ್ ವೈಅವರಿಗೆ ಈಗ ಮಾರ್ಗದರ್ಶಕ ಮಂಡಳಿಯೂ ಇಲ್ಲ, ಬಿಜೆಪಿಗೆ ಮಾರ್ಗದರ್ಶನ ಬೇಕಿಲ್ಲ. ಬಿಎಸ್ ವೈಯವರ ರಾಜಕೀಯ ಬದುಕಿಗೆ ಬಿಜೆಪಿ ದುರಂತ ಅಂತ್ಯ ತೋರಿಸುತ್ತಿದೆ'' ಎಂದು ಕಾಂಗ್ರೆಸ್ ಟ್ವೀಟಿಸಿದೆ. 

Similar News