×
Ad

ಈ ಬಾರಿ ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Update: 2023-04-11 14:09 IST

ಬೆಂಗಳೂರು: ಬಿಜೆಪಿಗೆ ಅಭಿವೃದ್ಧಿಯ ಆಧಾರದಲ್ಲಿ ಧನಾತ್ಮಕ ಕಾರ್ಯಸೂಚಿಯೊಂದಿಗೆ ಚುನಾವಣೆಗೆ ಹೋಗಬೇಕು ಎನ್ನುವ ಆಶಯ ಇದೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಮೂಲಸೌಕರ್ಯದ ಅಭಿವೃದ್ಧಿ, ಸಂಪರ್ಕ ಕ್ಷೇತ್ರದ ಗಮನಾರ್ಹ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪೂರಕ ಎಂದು ನುಡಿದರು.

ಬಡವರಿಗೆ ಅಗತ್ಯವಿರುವ ಸೌಕರ್ಯಗಳಿಗಾಗಿ ಸ್ವಾತಂತ್ರ್ಯ ಬಂದ ಏಳು ದಶಕಗಳ ನಂತರವು ಜನರು ತೊಳಲಾಡುತ್ತದ್ದ ಪರಿಸ್ಥಿತಿ ಇತ್ತು. ಜನರ ಕಷ್ಟಗಳನ್ನು ಬಗೆಹರಿಸುವಲ್ಲಿ ನರೇಂದ್ರ ಮೋದಿಜಿ ದೊಡ್ಡ ಹೆಜ್ಜೆ ಇಟ್ಟರು. ಗಾಂಧೀಜಿ ಹೇಳಿದಂತೆ ಸ್ವಚ್ಛತೆಗೆ ಆದ್ಯತೆ ಕೊಡಲಾಯಿತು ಎಂದ್ಛುವರು ವಿವರಿಸಿದರು.

ಮನೆಯಿಂದ ಸ್ವಚ್ಛತೆ ಆರಂಭವಾಗಬೇಕು. ಉತ್ತರ ಕರ್ನಾಟಕ ಪ್ರವಾಸ ಸಂದರ್ಭದಲ್ಲಿ ಮಹಿಳೆಯರು ಶೌಚಕ್ಕೆ ಹೋಗಲು ಸಂಜೆವರೆಗು ಕಾಯಬೇಕಿತ್ತು. ಇದನ್ನು ನಾವು ಸ್ವತಃ ಗಮನಿಸಿದ್ದೇನೆ. ಇಂಥ ಸಮಸ್ಯೆ ಗಮನಿಸಿದ ಮೋದಿಜಿ ಅವರು ಶೌಚಾಲಯಗಳನ್ನು ನಿರ್ಮಿಸಿ ಇದನ್ನು ಬಗೆಹರಿಸಲು ಮುಂದಾದರು. ಈ ವಿಚಾರದಲ್ಲಿ ಶೌಚಾಲಯ ನಿರ್ಮಾಣದ ಕ್ರಾಂತಿ ಮಾಡಿದರು ಎಂದು ಮೆಚ್ಚುಗೆ ಸೂಚಿಸಿದರು.

ಮೋದಿಜಿ ವಾರಣಾಸಿಯಲ್ಲಿ ಪೊರಕೆ ಹಿಡಿದರೆ ದೇಶ ಸ್ವಚ್ಛ ಅಗುತ್ತಾ ಎಂದು ಕಾಂಗ್ರೆಸ್‍ನವರು ವ್ಯಂಗ್ಯವಾಗಿ ನಕ್ಕು ಟೀಕಿಸಿದ್ದರು. ಆದರೆ, ಶೌಚಾಲಯ ನಿರ್ಮಾಣಕ್ಕೆ ಎಸ್.ಸಿ/ಎಸ್.ಟಿ ಸಮುದಾಯಗಳಿಗೆ 15 ಸಾವಿರ, ಹಿಂದುಳಿದ ವರ್ಗಗಳ ಮನೆಗಳಿಗೆ 12 ಸಾವಿರ ಕೊಡಲಾಯಿತು. 11 ಕೋಟಿಗೂ ಹೆಚ್ಚು ಶೌಚಾಲಯಗಳ ನಿರ್ಮಾಣ ಮತ್ತು ಹೊಸದಾಗಿ ಯಾವುದೇ ಮನೆ ನಿರ್ಮಾಣ ಮಾಡಿದರು ಶೌಚಾಲಯ ಕಡ್ಡಾಯ ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು.

ಗ್ಯಾಸ್ ಕನೆಕ್ಷನ್‍ಗೆ ಎಂ.ಪಿ ಗಳ ಶಿಫಾರಸು ಪತ್ರ ಬೇಕಾಗಿತ್ತು. ಅದರೆ, ಈಗ ಗ್ಯಾಸ್ ಇಲ್ಲದ ಮನೆಗೆ ಗ್ಯಾಸ್ ಸಂಪರ್ಕ ನೀಡಲಾಗಿದೆ. ಯುಪಿಎ ಸರ್ಕಾರದ ಆರೋಗ್ಯ ಇಲಾಖೆಯ ವರದಿ ಪ್ರಕಾರ ಮಹಿಳೆಯರ ಮೇಲೆ ಹೊಗೆಯಿಂದ ಆಗುವ ತೊಂದರೆ ಬಗ್ಗೆ ಉಲ್ಲೇಖ ಇದ್ದ ವರದಿ ವರದಿಯಾಗಿಯೇ ಉಳಿದಿತ್ತು. ಆದರೆ ಮೋದಿಜಿ ಸರ್ಕಾರದಲ್ಲಿ ಉಚಿತ ಗ್ಯಾಸ್ ನೀಡುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಮಹಿಳೆಯರು ಖುಷಿಯಲ್ಲಿ ಇದ್ದಾರೆ.  ಶೌಚಾಲಯ ವ್ಯವಸ್ಥೆ ಮತ್ತು ಉಜ್ವಲ ಯೋಜನೆಯನ್ನು ಮನೆ ಮನೆಗೆ ನೀಡಲಾಗಿದೆ. ವಿಧವಾ ವೇತನವನ್ನು ಬಿಎಸ್ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ 200 ರಿಂದ 500 ರೂ ಹೆಚ್ಚಳ ಮಾಡಿದ್ದರು. ಈಗ 1000 ರೂ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆ ಜಾರಿ ಮಾಡಿದ್ದೇವೆ. ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ಪಿಂಚಣಿ ಕೊಡುತ್ತಿದ್ದಾರೆ. ಮನೆಯ ವೃದ್ಧ ವೃದ್ಧೆಗೆ ಸೇರಿ 2400 ರೂ ಕೊಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಇವತ್ತು ಗ್ಯಾರಂಟಿ ಕುರಿತು ಮಾತನಾಡುತ್ತಿದೆ. ತಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಮುಖಂಡರು ಏನನ್ನೂ ಮಾಡಲಿಲ್ಲ. ಬಡವರ ಕುರಿತು ಕಳಕಳಿ ಅವರಲ್ಲಿ ಇರಲಿಲ್ಲ. ಕುರ್ಚಿ ರಾಜಕೀಯವಷ್ಟೇ ಅವರ ಎದುರಿಗೆ ಇತ್ತು ಎಂದು ಟೀಕಿಸಿದರು

Similar News