×
Ad

ಬಿಜೆಪಿಯ ಅವಮಾನ ಸಹಿಸದೇ ರಾಜಕೀಯದಿಂದಲೇ ಪಲಾಯನ ಮಾಡಿದ ಈಶ್ವರಪ್ಪ: ಕಾಂಗ್ರೆಸ್

Update: 2023-04-11 15:48 IST

ಬೆಂಗಳೂರು: ಮಾಜಿ ಸಚಿವ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ಕಾಂಗ್ರೆಸ್, 'ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ, ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ' ಎಂದು ವ್ಯಂಗ್ಯವಾಡಿದೆ. 

'ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಈಶ್ವರಪ್ಪ ಈಗ ಟಿಕೆಟ್‌ಗೂ ಲಾಭಿ ನಡೆಸಿ ಸುಸ್ತಾದರು. ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು' ಎಂದು ಮಾಜಿ ಸಚಿವರ ವಿರುದ್ಧ ವ್ಯಂಗ್ಯವಾಡಿದೆ. 

ಇದನ್ನೂ ಓದಿಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

Similar News