×
Ad

ಮೋದಿ- ಶಾ ಜೋಡಿಯ ಮಸಲತ್ತಿಗೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ: ಕಾಂಗ್ರೆಸ್

Update: 2023-04-11 18:06 IST

ಬೆಂಗಳೂರು: ''ಮೋದಿ- ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ'' ಎಂದು ವಿಪಕ್ಷ ಕಾಂಗ್ರೆಸ್ ಕುಟುಕಿದೆ. 

ಈ ಸಂಬಂಧ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ'' ಎಂದು ಹೇಳಿದೆ. 

''ಯಡಿಯೂರಪ್ಪ - ಔಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ - ಔಟ್, ಈಶ್ವರಪ್ಪ - ಔಟ್, ಜಗದೀಶ್ ಶೆಟ್ಟರ್ - ಔಟ್?, ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

Similar News