×
Ad

ಉಡುಪಿ: ಗಾಂಜಾ ಮಾರಾಟ ಪ್ರಕರಣ; ಆರೋಪಿಗೆ 5 ವರ್ಷ ಕಠಿಣ ಜೈಲುಶಿಕ್ಷೆ, ದಂಡ

Update: 2023-04-11 21:03 IST

ಉಡುಪಿ, ಎ.11: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ.

ಮಹಾರಾಷ್ಟ್ರದ ವಿನೋದ್ ರಾಮ್ ಸೇವಕ್ ಶಿಕ್ಷೆಗೆ ಗುರಿಯಾದ ಆರೋಪಿ.

2019ರಲ್ಲಿ ಉಡುಪಿ ಕಲ್ಪನಾ ಲಾಡ್ಜ್ ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಡಿಸಿಐಬಿ ಘಟಕದ ಪೊಲೀಸ್ ನಿರೀಕ್ಷಕ ಸಿ.ಕಿರಣ್ ಬಂಧಿಸಿ, ಆತನಿಂದ 10 ಕೆಜಿ 600 ಗ್ರಾಂ ತೂಕದ ಗಾಂಜಾ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಸೆನ್ ಠಾಣೆಗೆ ಹಸ್ತಾಂತರಿಸಿದ್ದರು.

ಆಗಿನ ಸೆನ್ ಠಾಣೆಯ ನಿರೀಕ್ಷಕ ಸೀತಾರಾಮ ಪಿ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿ ವಿರುದ್ಧ 2020ರ ಮಾ.3ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶಾಂತವೀರ ಶಿವಪ್ಪ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದರು. ಸರಕಾರಿ ಅಭಿಯೋಜಕಿ ಶಾಂತಿಬಾಯಿ ಹಾಗೂ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

Similar News