ಉಡುಪಿ: ಮಳೆಯಿಂದ ಮನೆ, ಕೊಟ್ಟಿಗೆಗೆ ಹಾನಿ
Update: 2023-04-11 21:29 IST
ಉಡುಪಿ : ಸೋಮವಾರ ಸಂಜೆ ಸುರಿದ ಮಳೆ ಹಾಗೂ ಬೀಸಿದ ಗಾಳಿಗೆ ಕಾರ್ಕಳ ತಾಲೂಕು ಹೆರ್ಮುಂಡೆ ಗ್ರಾಮದ ಶಂಕರ ಪೂಜಾರಿ ಎಂಬವರ ವಾಸ್ತವ್ಯದ ಮನೆ ಹಾಗೂ ಜಾನುವಾರು ಕೊಟ್ಟಿಗೆಗೆ ಹಾನಿಯಾಗಿದೆ.
ಗಾಳಿ-ಮಳೆಯಿಂದ ಮನೆ ಹಾಗೂ ಕೊಟ್ಟಿಗೆಗೆ ಭಾಗಶ: ಹಾನಿಯಾಗಿದ್ದು, 20 ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ನಿನ್ನೆ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ಮಳೆಯ ಮುನ್ಸೂಚನೆ ಇದ್ದರೂ, ಕರಾವಳಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇನ್ನೂ ಸುರಿದಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಭೀತಿ ಕಾಡುತ್ತಿದೆ.