ಬಿಜೆಪಿ ಅಭ್ಯರ್ಥಿಗಳ ಪಟ್ಟಿ: ಬಿ.ವೈ ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್
Update: 2023-04-11 21:52 IST
ಹೊಸದಿಲ್ಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಹೆಸರನ್ನು ಘೋಷಿಸಲಾಗಿದೆ. ಈ ಮೂಲಕ ಶಿಕಾರಿಪುರದಲ್ಲಿ ವಿಜಯೇಂದ್ರ ಅವರನ್ನು ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಜೆಪಿ ಹೈಕಮಾಂಡ್ ಒಪ್ಪಿಕೊಂಡಂತಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಈ ಹಿಂದೆ ವಿಧಾನಪರಿಷತ್ ಚುನಾವಣೆ ವೇಳೆ ಟಿಕೆಟ್ ಕೈ ತಪ್ಪಿತ್ತು.