ಚಿತ್ತಾಪುರ ಕ್ಷೇತ್ರ: ರೌಡಿಶೀಟರ್‌ ಮಣಿಕಂಠ ರಾಠೋಡಗೆ ಬಿಜೆಪಿ ಟಿಕೆಟ್

Update: 2023-04-12 08:25 GMT

ಕಲಬುರಗಿ: ರೌಡಿ ಶೀಟರ್ ಪಟ್ಟಿಯಲ್ಲಿರುವ, ಇತ್ತೀಚೆಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಮಣಿಕಂಠ ರಾಠೋಡರನ್ನು ಬಿಜೆಪಿಯು ಚಿತ್ತಾಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಚಿತ್ತಾಪುರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ.

ಅಕ್ಕಿ ಅಕ್ರಮ ಸಾಗಾಣಿಕೆಯ ಆರೋಪ ಸೇರಿ ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಮಣಿಕಂಠ ರಾಠೋಡ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು.  ಆದರೆ ಹೈಕೋರ್ಟ್‍ನಲ್ಲಿ ಮಣಿಕಂಠ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಪಡೆದಿದ್ದಾರೆ.

ಇದೀಗ ಚುನಾವಣೆಯಲ್ಲಿ ಮಣಿಕಂಠ ಸ್ಪರ್ಧಿಸುತ್ತಿರುವುದು ಪಕ್ಷದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಮುಖಂಡರಾದ ಅರವಿಂದ ಚವ್ಹಾಣ್, ಮಾಜಿ ಶಾಸಕ ದಿ. ವಾಲ್ಮೀಕಿ ನಾಯಕ್ ‍ಪುತ್ರ ವಿಠ್ಠಲ ನಾಯಕ್ ಈ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದರು.

Similar News