×
Ad

ಬಾಂಬ್ ಬೆದರಿಕೆ: ದಿಲ್ಲಿ ಶಾಲೆಯಿಂದ ಮಕ್ಕಳ ತೆರವು

Update: 2023-04-12 13:25 IST

ಹೊಸದಿಲ್ಲಿ: ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ದಕ್ಷಿಣ ದಿಲ್ಲಿಯ ಶಾಲೆಯ ವಿದ್ಯಾರ್ಥಿಗಳನ್ನು ಬುಧವಾರ ತೆರವುಗೊಳಿಸಲಾಗಿದೆ.

ಸಾದಿಕ್ ನಗರದಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗ್ಗೆ  10:49 ಕ್ಕೆ ಇಮೇಲ್ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿರುವ ಮಕ್ಕಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಹೊರಗೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದು, ಹೆಚ್ಚಾಗಿ ವಿದ್ಯಾರ್ಥಿಗಳ ಪೋಷಕರು, ಗೇಟ್ ಬಳಿ ಒಟ್ಟುಗೂಡಿದ್ದರು.

"ನಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಂತೆ ಶಾಲೆಯಿಂದ ನಮಗೆ ಸಂದೇಶ ಬಂದಿದೆ" ಎಂದು ಪೋಷಕರಲ್ಲಿ ಒಬ್ಬರು ಹೇಳಿದರು.

"ಶಾಲೆಯ ಅಡ್ಮಿನ್‌ಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಅಜ್ಞಾತ ವ್ಯಕ್ತಿಯಿಂದ  ಇದೇ ರೀತಿಯ ಇಮೇಲ್ ಅನ್ನು ಸ್ವೀಕರಿಸಿದ್ದಾರೆ. ಅದು ಹುಸಿ ಇಮೇಲ್ ಆಗಿತ್ತು. ನಮ್ಮ ತಂಡಗಳು ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಸ್ಥಳದಲ್ಲಿವೆ''ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂದನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

Similar News