×
Ad

ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ

Update: 2023-04-12 13:43 IST

ಪುತ್ತೂರು: ವಿವಾಹಿತ ಮಹಿಳೆಯೋರ್ವರು ತನ್ನ ತವರು ಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ.

ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ, ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಶೋತ್ತಮ ಎಂಬವರ ಪತ್ನಿ ಪುಣ್ಯಶ್ರೀ(32) ಮೃತಪಟ್ಟ ಮಹಿಳೆ. ಅವರು ಕಳೆದ ಕೆಲ ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತನ್ನ ತವರು ಮನೆಯಾದ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ.

ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಪುಣ್ಯಶ್ರೀ ಮಾತನಾಡಿದ್ದರು. ಅಲ್ಲದೆ ಅದೇ ದಿನ ತನ್ನ ಚಿಕ್ಕಮ್ಮನಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Similar News