ಖಮ್ಮಂ: ಗೃಹ ಬಳಕೆಯ ಸಿಲಿಂಡರ್ ಸ್ಫೋಟ, ಇಬ್ಬರು ಮೃತ್ಯು, ಹಲವರಿಗೆ ಗಂಭೀರ ಗಾಯ
ಖಮ್ಮಂ: ಖಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದ ಕಾರೇಪಲ್ಲಿ ಮಂಡಲಿಯ ಚಿಮಲಪಾಡುವಿನಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಯೋಜಿಸಿದ್ದ ಆತ್ಮೀಯ ಸಮ್ಮೇಳನದ ಸಮಾವೇಶದ ವೇಳೆ ಗೃಹಬಳಕೆಯ ಗ್ಯಾಸ್ ರೀಫಿಲ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ, ಪತ್ರಕರ್ತರು ಸೇರಿದಂತೆ ಹಲವರು ತೀವ್ರ ಗಾಯಗೊಂಡಿದ್ದಾರೆ.
ಬಿಆರ್‌ಎಸ್ ಸಭೆಯಲ್ಲಿ ಉತ್ಸಾಹಿ ಪಕ್ಷದ ಕಾರ್ಯಕರ್ತರು ಪಟಾಕಿಗಳಿಗೆ ಬೆಂಕಿ ಹಚ್ಚಿದಾಗ ಕಿಡಿಗಳು ಪಕ್ಕದ ಹುಲ್ಲಿನ ಮನೆಗೆ ವ್ಯಾಪಿಸಿ ಬೆಂಕಿ ಹೊತ್ತಿಕೊಂಡಿತು. ಹುಲ್ಲಿನ ಮನೆಯಲ್ಲಿದ್ದ ಹಲವಾರು ಸಿಲಿಂಡರ್‌ಗಳು ಬೆಂಕಿಯಿಂದ ಸ್ಫೋಟಗೊಂಡಿವೆ. ಘಟನೆಯಿಂದ ಮನೆಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಸ್ಫೋಟದ ರಭಸಕ್ಕೆ ವ್ಯಕ್ತಿಯ ಕಾಲು ಹಾಗೂ ಕೈಗಳು ತುಂಡಾಗಿವೆ.
ಮೂಲಗಳ ಪ್ರಕಾರ ಘಟನೆಯಲ್ಲಿ ಗಾಯಗೊಂಡಿರುವ ಇತರ ನಾಲ್ವರ ಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.