ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಗ್ರಾಮೀಣ ಪ್ರತಿಭೆ ಫಾಝಿಲ್ ರಹ್ಮಾನ್
ಮಲೆನಾಡಿನ ಸಣ್ಣ ಗ್ರಾಮವೊಂದರ ಪ್ರತಿಭೆ ಫಾಝಿಲ್ ರಹ್ಮಾನ್ ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆ ಆಗುವ ಮೂಲಕ ಫಾಝಿಲ್ ಮಲೆನಾಡಿಗೆ ಹೆಮ್ಮೆ ಮೂಡಿಸಿದ್ದಾರೆ.
ಬೆಂಗಳೂರು ನಗರ ವಿಶ್ವವಿದ್ಯಾಲಯ ದಲ್ಲಿ ಬಿ.ಎ. ವ್ಯಾಸಂಗ ಮಾಡುತ್ತಿರುವ ಫಾಝಿಲ್ ರಹ್ಮಾನ್, ಬೆಂಗಳೂರು ವಿಶ್ವವಿದ್ಯಾಲಯದ ಪರವಾಗಿ ಕಳೆದ ಮಾರ್ಚ್ ತಿಂಗಳ ಹದಿನೆಂಟು ರಂದು ಪಂಜಾಬ್ ನ ಚಂಡೀಗಢ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವೇಟ್ ಲಿಫ್ಟಿಂಗ್ ಸ್ವರ್ದೆಯಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮೂಲಕ ಮುಂಬರುವ ಮೇ ತಿಂಗಳಲ್ಲಿ ನಡೆಯಲಿರುವ ಖೆಲೋ ಇಂಡಿಯಾ ಸ್ವರ್ಧೆಗೆ ಆಯ್ಕೆಯಾಗಿದ್ದಾರೆ.
ಫಾಝಿಲ್ ರಹ್ಮಾನ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸಣ್ಣಕೆರೆಯ ಅಬ್ದುಲ್ ರಹ್ಮಾನ್ ಮತ್ತು ಜಮೀಲ ದಂಪತಿಯ ಪುತ್ರ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ನಗರ ಜಿಲ್ಲೆ ಹಾಗು ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇದರ ಸಹಯೋಗದೊಂದಿಗೆ ನಡೆದ 2022-23 ನೇ ಸಾಲಿನ ಇಂಟರ್ ಯೂನಿವರ್ಸಿಟಿ ಚಾಂಪಿಯನ್ ಶಿಪ್ ಕ್ರೀಡಾಕೂಟಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟದ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ, ಉಜಿರೆಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಿಂಚಿದ್ದಾರೆ.