×
Ad

ಕೈ ತಪ್ಪಿದ ಟಿಕೆಟ್: ರೌಡಿ ಶೀಟರ್ ಸೈಲೆಂಟ್ ಸುನೀಲ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ

Update: 2023-04-12 19:01 IST

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೈಲೆಂಟ್ ಸುನೀಲ್ ಹಾಗೂ ಸುನೀಲ್ ವೆಂಕಟೇಶ್ ಅವರ ಬೆಂಬಲಿಗರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ನೀಡುವ ಮೂಲಕ, ಚಾಮರಾಜಪೇಟೆ ಕ್ಷೇತ್ರಕ್ಕೆ ಅನ್ಯಾಯವೆಸಗಲಾಗಿದೆ ಎಂದು ಗಲಾಟೆ ಮಾಡಿದ ಸೈಲೆಂಟ್ ಸುನೀಲ್ ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಸ್ಥಳದಲ್ಲಿ ವಾಗ್ವಾದ ನಡೆಯಿತು.

Similar News