×
Ad

ಬಂಟ್ವಾಳ | ಜಕ್ರಿಬೆಟ್ಟುವಿನಲ್ಲಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2023-04-13 09:28 IST

ಬಂಟ್ವಾಳ, ಎ.13: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕಿಗೆ ಢಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಸರಪಾಡಿ ನಿವಾಸಿ ಸೇಸಪ್ಪ ಯಾನೆ ಶ್ರೇಯಸ್(30) ಎಂದು ಗುರುತಿಸಲಾಗಿದೆ.

ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಶ್ರೇಯಸ್ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬಿ‌.ಸಿ.ರೋಡ್ ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಯಲ್ಲಿರುವ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ಬಂದ ಸರಕಾರಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ, ಶ್ರೇಯಸ್ ರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ಮಂಗಳೂರಿಗೆ ಸಾಗಿಸಲಾಯಿತು. ಆದರೆ ದಾರಿಮಧ್ಯೆ ಶ್ರೇಯಸ್ ಕೊನೆಯುಸಿರೆಳೆದಿದ್ದಾರೆ ಎಂದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್ಸೈ ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News