×
Ad

ಅರೆಶಿರೂರು | ಹೆಲಿಪ್ಯಾಡ್ ಬಳಿ ಕಾಣಿಸಿಕೊಂಡ ಬೆಂಕಿ: ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ

Update: 2023-04-13 12:43 IST

ಬೈಂದೂರು, ಎ.13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಅರೆಶಿರೂರಿನಲ್ಲಿ ನಡೆದಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಲೆಂದು ಸಿಎಂ ಬೊಮ್ಮಾಯಿ ಪತ್ನಿ ಜೊತೆ ಅರೆಶಿರೂರು ಹೆಲಿಪ್ಯಾಡ್ ನಲ್ಲಿಂದು ಬೆಳಗ್ಗೆ ಬಂದಿಳಿದ ವೇಳೆ ಈ ಘಟನೆ ಸಂಭವಿಸಿದೆ.

ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.

ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷಿಪ್ರ
ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಿದರು.

Similar News