ಕೊಲ್ಲೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

Update: 2023-04-13 13:44 GMT

ಕೊಲ್ಲೂರು : ಮುಂಬರುವ ಮೇ10ರ ವಿಧಾನಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಮುನ್ನ ಕರಾವಳಿ ಧಾರ್ಮಿಕ ಸ್ಥಳಗಳ ಸಂದರ್ಶನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಪತ್ನಿ ಸಮೇತರಾಗಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬೈಂದೂರು ತಾಲೂಕಿನ ಅರೆಶಿರೂರು ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿಗಳು, ಅಲ್ಲಿಂದ ಬೆಳಗ್ಗೆ 10.30ಕ್ಕೆ ದೇವಸ್ಥಾನ ತಲುಪಿದರು. ಮೊದಲು ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀಮೂಕಾಂಬಿಕಾಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. 

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು  ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Similar News