ಪಿಯುಸಿ ತರಗತಿಗಳ ವೇಳಾಪಟ್ಟಿ ಪ್ರಕಟ: ಜೂ.1ರಿಂದ ಪಿಯುಸಿ ಕಾಲೇಜುಗಳು ಆರಂಭ

Update: 2023-04-13 17:13 GMT

ಬೆಂಗಳೂರು, ಎ.11: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ 2023-24ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ಪಿಯುಸಿ ವೇಳಾಪಟ್ಟಿಯ ಪ್ರಕಾರ ರಾಜ್ಯದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಜೂ.1ರಿಂದ ಆರಂಭಿಸಲಾಗುತ್ತಿದೆ. ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆಯು ಎಸೆಸೆಲ್ಸಿ ಫಲಿತಾಂಶ ಪ್ರಕಟವಾದ ನಂತರ ಮೊದಲ ಕಾರ್ಯನಿರತ ದಿನದಿಂದ ಪ್ರಾರಂಭವಾಗಲಿದೆ. ಇನ್ನು ದ್ವಿತೀಯ ಪಿಯುಸಿಗೆ ದಾಖಲಾತಿ ಪ್ರಕ್ರಿಯೆಯು ಮೇ 22ರಿಂದ ಆರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.1ರಿಂದ ಅ.13ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅ.30ರಿಂದ ಫೆ.29 ಎರಡನೆಯ ಅವಧಿಯ ತರಗತಿಗಳು ನಡೆಯಲಿವೆ. ಅ.13ರಿಂದ ಅ.29ರವರೆಗೆ ಮಧ್ಯಂತರ ರಜೆ ಇರಲಿದೆ. ಬೇಸಿಗೆ ರಜೆಯು ಮಾ.31ರಿಂದ ಆರಂಭವಾಗಲಿದೆ. ಮಾ.30 ಕೊನೆಯ ಕಾರ್ಯನಿರತ ದಿನವಾಗಿದೆ ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. 

ವೇಳಾಪಟ್ಟಿಯನ್ನು ಹಾಗಾಗ್ಗೆ ಇಲಾಖೆಯು ಆದೇಶಕ್ಕೆ ಅನುಗುಣವಾಗಿ ಬದಲಾವಣೆ ಮಾಡುವ ಷರತ್ತಿಗೆ ಒಳಪಟ್ಟಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.  

Similar News