ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗೆ ಹೆಚ್ಚಳಕ್ಕೆ ಆದೇಶ
Update: 2023-04-13 23:01 IST
ಬೆಂಗಳೂರು, ಎ. 13: ದೇಶದಲ್ಲಿ ಪುನಃ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಶೇ.30ರಷ್ಟು ರ್ಯಾಟ್ ಹಾಗೂ ಶೇ.70ರಷ್ಟು ಆರ್‍ಟಿಪಿಸಿಆರ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹೆಚ್ಚು ಜನಸಂಖ್ಯೆ ಪ್ರದೇಶಗಳಲ್ಲಿ ಪಾಸಿಟಿವಿಟಿ ಆಧಾರದ ಮೇಲೆ ದಿನಕ್ಕೆ 20 ಸಾವಿರ ಪರೀಕ್ಷೆ ನಿಗದಿಪಡಿಸಲಾಗಿದ್ದು, ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವಂತೆ ಹೇಳಲಾಗಿದೆ.
ಅದೇ ರೀತಿ, ಇನ್ನೂ, ರೋಗಲಕ್ಷಣ ಕಂಡುಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಪರೀಕ್ಷಿಸಬೇಕೆಂದು ಎಲ್ಲ ಜಿಲ್ಲಾಧಿಕಾರಿಗಳು, ಪ್ರಯೋಗಾಲಯಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕೋವಿಡ್ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.