×
Ad

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ.ಪಿ.ಕುಮಾರಸ್ವಾಮಿ

Update: 2023-04-14 11:33 IST

ಚಿಕ್ಕಮಗಳೂರು, ಎ.14 : ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಈಗಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಎಂ.ಪಿ.ಕುಮಾರಸ್ವಾಮಿ ಅವರು ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದರು. 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. 

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಪಿ ಕುಮಾರಸ್ವಾಮಿ, " ನನ್ನನ್ನ ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದರು. ಇದಕ್ಕೆಲ್ಲಾ ಸಿ.ಟಿ ರವಿ ಹಾಗೂ ಪ್ರಾಣೇಶ್ ಕಾರಣ. ಅವರೇ ಜನರನ್ನು ಕಳಿಸಿ, ಅವರೇ ಜಗಳ ಮಾಡಿಸಿ ನನ್ನ ಮೇಲೆ ಕೆಟ್ಟ ಅಭಿಪ್ರಾಯ ಬರೋ ರೀತಿ ಮಾಡಿದರು. ಅವರು ಪಕ್ಷ ಉಳಿಸಲ್ಲ'' ಎಂದು ಕಿಡಿಕಾರಿದರು. 

''ಚುನಾವಣೆಗೆ ಸ್ಪರ್ಧಿಸುವುದು ಖಚಿತ''

''ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ನಾಳೆ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ'' ಎಂದು ತಿಳಿಸಿದರು. 

Similar News