ಕಾಂಗ್ರೆಸ್ MLC ಜೊತೆ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಲಕ್ಷ್ಮಣ ಸವದಿ

Update: 2023-04-14 06:45 GMT

ಬೆಂಗಳೂರು: ವಿಧಾನ ಪರಿಷತ್ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲು, ಲಕ್ಷ್ಮಣ ಸವದಿ ಶುಕ್ರವಾರ ಬೆಳಿಗ್ಗೆ ಇಲ್ಲಿನ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದು ಕುತೂಹಲ ಮೂಡಿಸಿದೆ. 

ಇಂದು ಸಂಜೆ  ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿರುವ ಸವದಿ, ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. 

ಇನ್ನು ನಿನ್ನೆ(ಗುರುವಾರ) ಅಥಣಿ ಪಟ್ಟಣದಲ್ಲಿ ಆಯೋಜಿಸಿದ್ದ ಬೃಹತ್ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸವದಿ, ''ನನ್ನ ಕ್ಷೇತ್ರದ ಅಭಿವೃದ್ಧಿಗೆ ಭರವಸೆ ಕೊಡುವ ಪಕ್ಷಕ್ಕೆ ಮಾತ್ರ ಸೇರುತ್ತೇನೆ. ಒಂದು ವೇಳೆ ಯಾರ ಮೇಲೂ ನಂಬಿಕೆ ಬರದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ'' ಎಂದು ಹೇಳಿದ್ದರು. 

Similar News