ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ
Update: 2023-04-14 14:34 IST
ಬೆಂಗಳೂರು, ಎ.14 : ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದರು.
ಈಗಾಗಲೇ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿರುವ ಸವದಿ, ಪರಿಷತ್ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸೇರಲಿರುವ ಲಕ್ಷ್ಮಣ ಸವದಿ: ಡಿಕೆಶಿ ಘೋಷಣೆ