ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ MLC ರಘು ಆಚಾರ್ ಜೆಡಿಎಸ್ ಸೇರ್ಪಡೆ
Update: 2023-04-14 15:03 IST
ಬೆಂಗಳೂರು, ಎ. 14: ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್ ಶುಕ್ರವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಗರದ ಜೆಪಿ ಭವನದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದರು.
ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ರಘು ಆಚಾರ್ ಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ಸಲ್ಲಿಸಿದ್ದರು.
ಚಿತ್ರದುರ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಕೆ.ಸಿ ವೀರೇಂದ್ರ (ಪಪ್ಪಿ) ರವರಿಗೆ ಟಿಕೆಟ್ ನೀಡಿದೆ. ಇದರಿಂದ ರಘು ಆಚಾರ್ ಅಸಮಾಧಾನಗೊಂಡಿದ್ದಾರೆ.