ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಮತದಾರರ ಒಲವು: ಪ್ರಸಾದ್ ರಾಜ್
ಬ್ರಹ್ಮಾವರ: ಉಡುಪಿ ಕ್ಷೇತ್ರದಲ್ಲಿ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಕಡೆಗಿದೆ. ಬಿಜೆಪಿಯ ದುರಾಡಳಿತ ಕಿತ್ತೆಸೆದು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಕೆಲಸ ಮಾಡಬೇಕು ಎಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ.
ಬ್ರಹ್ಮಾವರದ ಮದರ್ ಪ್ಯಾಲೇಸ್‌ನಲ್ಲಿ ನಡೆದ ಇಂದು ನಡೆದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯನ್ನು ದ್ದೇಶಿಸಿ ಅವರು ಮಾತನಾಡುತಿದ್ದರು.
ಆರಂಭದಿಂದಲೂ ಬ್ರಹ್ಮಾವರದಲ್ಲಿ ನನಗೆ ಕಾರ್ಯಕರ್ತರಿಂದ ಹಾಗೂ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಭಾಗದಲ್ಲಿ ತನ್ನ ತಾಯಿ ಸರಳ ಕಾಂಚನ್ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅಂದು ತಾಯಿಗೆ ನೀಡಿದ ಅಭೂತಪೂರ್ವ ಬೆಂಬಲ ಈಗಲೂ ನನಗೆ ಸಿಗುತ್ತಿರುವುದು ನನಗೆ ಮತ್ತಷ್ಟು ಹುರುಪು ತಂದಿದೆ ಎಂದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎ.ಗಫೂರ್, ಅಮೃತ್ ಶೆಣೈ, ನಾಗೇಶ್, ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಕಿಶನ್ ಹೆಗ್ಡೆ, ಸುಧಾಕರ್ ಶೆಟ್ಟಿ, ರಮೇಶ್ ಶೆಟ್ಟಿ, ವಿಜಯ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ಉದಯ್, ಚೇರ್ಕಾಡಿ ಪ್ರಭಾಕರ್ ಶೆಟ್ಟಿ, ರಾಘವೇಂದ್ರ ಶೆಟ್ಟಿ, ಗೋಪಿ ನಾಯ್ಕ್, ಮಲ್ಲಿಕಾ, ಸಂಜೀವ ಪೂಜಾರಿ, ಜಯರಾಮ್ ಗಾಣಿಗ, ಅಬ್ಬು ಸಾಹೇಬ್, ರಾಘವೇಂದ್ರ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.