ಸಾಮಾಜಿಕ ಮಾಧ್ಯಮಗಳಲ್ಲಿ ಜಾಹಿರಾತು ಪ್ರಕಟಕ್ಕೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕಾರ್ಯಾಗಾರ
Update: 2023-04-14 19:31 IST
ಉಡುಪಿ, ಎ.14: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ -2023ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹಿರಾತು ನೀಡುವ ಕುರಿತು ಜಿಲ್ಲಾ ಎಂಸಿಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹಿರಾತಿನಲ್ಲಿ ಯಾವ ಯಾವ ವಿವರಗಳು ಇರಬೇಕು, ಇರಬಾರದು ಸೇರಿದಂತೆ ವಿವಿಧ ವಿಷಯಗಳನ್ನು ವಿವರವಾಗಿ ತಿಳಿಸಲು, ಎಲ್ಲಾ ರಾಜಕೀಯ ಪಕ್ಷಗಳಿಗೆ, ಹಾಗೂ ಎಲ್ಲಾ ಅಭ್ಯರ್ಥಿಗಳಿಗೆ ಮತ್ತು ಅವರ ಏಜೆಂಟರುಗಳಿಗೆ ಎ.15 ರಂದು ಬೆಳಗ್ಗೆ 11:30ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.