ಉಡುಪಿ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
Update: 2023-04-14 19:33 IST
ಉಡುಪಿ, ಎ.14: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇರ್ಡ್ಕ ಅವರ ಜನ್ಮ ದಿನಾಚರಣೆ ಪ್ರಯುಕ್ತ, ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಇಂದು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ, ತರಬೇತಿನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಎಎಸ್ಪಿ ಸಿದ್ದಲಿಂಗಪ್ಪ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.