×
Ad

ಬಂಟ್ವಾಳ : ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

Update: 2023-04-14 19:58 IST

ಬಂಟ್ವಾಳ :ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಶುಕ್ರವಾರ ನಡೆದಿದೆ.

ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತರು ಎಂದು ಗುರುತಿಸಲಾಗಿದೆ.

ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೊಂಬಯ್ಯ ಅವರು ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅಪಘಾತ ‌ನಡೆದ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News