×
Ad

ಕುಂದಾಪುರ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Update: 2023-04-14 21:33 IST

ಕುಂದಾಪುರ: ಕುಂದಾಪುರ  ಪುರಸಭೆ ವ್ಯಾಪ್ತಿಯ  ಹಲವಾರು ಮಂದಿ ಯುವಕರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇವರನ್ನು ಕ್ಷೇತ್ರದ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಆತ್ಮೀಯವಾಗಿ  ಬರಮಾಡಿಕೊಂಡರು.

ವಾಟ್ಸಪ್ಪ್ ಯೂನಿವರ್ಸಿಟಿಯ ಈ ಕಾಲದಲ್ಲಿ, ಯಾವುದೇ ಪ್ರಚೋದನೆ ಗಳಿಗೆ ಒಳಗಾಗದೆ ಬಹಳ ಉತ್ಸಾಹದಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಬರುತ್ತಿರುವ ಈ ಯುವಕರನ್ನು ಕಂಡರೆ ದೇಶದ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡುತ್ತದೆ ಎಂದು ಎಲ್ಲರನ್ನೂ ಸ್ವಾಗತಿಸುತ್ತಾ ದಿನೇಶ್ ಹೆಗ್ಡೆ ನುಡಿದರು.

ಅಂಬೇಡ್ಕರ್ ಜನ್ಮದಿನಾಚರಣೆ: ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸೇರಿದವರು ಪುಷ್ಪ ನಮನ ಸಲ್ಲಿಸುವ ಮೂಲಕ ಸಂವಿಧಾನಶಿಲ್ಪಿಯ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್ ಹಾಗೂ ಕಿಶನ್ ಹೆಗ್ಡೆ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಘಟಕ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಕೋಟ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Similar News