×
Ad

ಅಂಬೇಡ್ಕರ್ ತತ್ವಾದರ್ಶಗಳು ಸರ್ವಕಾಲಿಕ ಸತ್ಯ : ಕುಯಿಲಾಡಿ

Update: 2023-04-14 21:34 IST

ಉಡುಪಿ: ದೇಶದ ಎಲ್ಲಾ ಆಗು ಹೋಗುಗಳಿಗೆ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾಗಿರುವ ಸಂವಿಧಾನವೇ ಸಾಕ್ಷಿ. ಭಾರತಕ್ಕೆ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಲ್ಲುತ್ತವೆ. ಅಂಬೇಡ್ಕರ್‌ರ ಉನ್ನತ ಮೌಲ್ಯಗಳು, ತತ್ವಾದರ್ಶಗಳು ಸರ್ವಕಾಲಿಕ ಸತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದಾರೆ.

ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ ಶೆಟ್ಟಿ ಮತ್ತು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು  ಮಾತನಾಡಿ, ಅಂಬೇಡ್ಕರ್‌ರ ಜೀವನ ಮೌಲ್ಯಗಳು ಮತ್ತು ಸಾಧನೆಗಳ ಗುಣಗಾನಗೈದರು.

ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ಸೇರಿದಂತೆ ಬಿಜೆಪಿ ಮುಖಂಡ ರಾದ ಮಹೇಶ್ ಠಾಕೂರ್, ವೀಣಾ ನಾಯ್ಕ್, ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೆ. ರಾಘವೇಂದ್ರ ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು. 

Similar News