ಶಿಗ್ಗಾವ್: ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ
Update: 2023-04-15 12:13 IST
ಶಿಗ್ಗಾವ್, ಎ.15: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಿಂದ ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಶಿಗ್ಗಾವ್ ನಲ್ಲಿ ಸಾಂಕೇತಿಕವಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
ಶಿಗ್ಗಾವ್ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಹಾವೇರಿ ಸಂಸದ ಸಿ.ಎಂ ಉದಾಸಿ, ಸಚಿವ ಸಿಸಿ ಪಾಟೀಲ್, ಪುತ್ರ ಭರತ್ ಬೊಮ್ಮಾಯಿ ಜೊತೆಗಿದ್ದರು.
ಎ.19ರಂದು ಸಿಎಂ ಬೊಮ್ಮಾಯಿ ಮತ್ತೊಮ್ಮೆ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾವಿ ಪಟ್ಟಣದಲ್ಲಿರುವ ಅಂಬೇಡ್ಕರ್ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.