ಕಾಂಗ್ರೆಸ್ ಮೂರನೇ ಪಟ್ಟಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ
Update: 2023-04-15 14:48 IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕೋಲಾರ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್ ಹೆಸರನ್ನು ಹೈಕಮಾಂಡ್ ಘೋಷಿಸಿದೆ.
ಸಿದ್ದರಾಮಯ್ಯ ಅವರು 2 ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ವರಿಷ್ಠರಿಗೆ ತಿಳಿಸಿದ್ದರು. ಇದರಿಂದ ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.
ಇದೀಗ ಅಂತಿಮವಾಗಿ ಕೋಲಾರ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್ ಹೆಸರನ್ನು ಅಂತಿಗೊಳಿಸಿದ್ದು, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಲಿದ್ದಾರೆ.
ಇದನ್ನೂ ಓದಿ: ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಅಥಣಿಯಿಂದ ಲಕ್ಷ್ಮಣ ಸವದಿಗೆ ಟಿಕೆಟ್