×
Ad

ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತ ವಿರುದ್ಧ ಕೋರ್ಟ್ ನಿಂದ ಜಾಮೀನು ರಹಿತ ವಾರಂಟ್

Update: 2023-04-15 17:33 IST

ಬೆಂಗಳೂರು, ಎ.15: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ. 

ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್.ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಪೀಠ, ಶನಿವಾರ ಬಂಧನ ರಹಿತ ವಾರಂಟ್ ಹೊರಡಿಸಿದೆ. ಎ.26ರಂದು ದತ್ತ ಅವರನ್ನು ನ್ಯಾಯಾಲಯಕ್ಕೆ ಹಾಜರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಲಯ ಹಲವು ಬಾರಿ ವಾರಂಟ್ ನೀಡಿದ್ದರೂ ದತ್ತ ಹಾಜರಾಗಿರಲಿಲ್ಲ. ಅಲ್ಲದೇ, ಕಳೆದ ವಿಚಾರಣೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

ಪ್ರಕರಣವೇನು?: 2022ರಲ್ಲಿ ದೂರುದಾರ ಸೋಮಶೇಖರ್ ಸೇರಿದಂತೆ ಇತರರು ದತ್ತ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಎ.15ರಂದು ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳು ಇದೇ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.

Similar News