×
Ad

ಕೈ ತಪ್ಪಿದ ಟಿಕೆಟ್: ಬಿಜೆಪಿಗೆ ರಾಜೀನಾಮೆ ನೀಡಿದ ಫೈಟರ್ ರವಿ

Update: 2023-04-15 18:15 IST

ಬೆಂಗಳೂರು: ನಾಗಮಂಗಲ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್‌ ಫೈಟರ್ ರವಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಮುಖ್ಯ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ. 

ನಾಗಮಂಗಲ ಬಿಜೆಪಿ ಟಿಕೆಟ್‌ಗಾಗಿ ಫೈಟರ್ ರವಿ ಮತ್ತು ಜೆಡಿಎಸ್‌ನಿಂದ ಉಚ್ಛಾಟನೆಗೊಂಡು ಇತ್ತೀಚಿಗೆ ಬಿಜೆಪಿ ಸೇರಿದ್ದ ಎಲ್.ಆರ್ ಶಿವರಾಮೇಗೌಡ ಪೈಪೋಟಿ ನಡೆಸಿದ್ದರು.

ಆದರೆ, ಬಿಜೆಪಿಯು ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರವರಿಗೆ ಟಿಕೆಟ್ ಘೋಷಿಸಿದ್ದು, ಇದರಿಂದ ರವಿ ಅಸಮಾಧಾನಗೊಂಡಿದ್ದಾರೆ. 

Similar News