ಎ.16ರಂದು ಉಚ್ಚಿಲದಲ್ಲಿ ಬಿಜೆಪಿ ಪಕ್ಷದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ
Update: 2023-04-15 19:15 IST
ಉಡುಪಿ, ಎ.15: ಮುಂದೂಡಲಾದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ನಾಳೆ ರವಿವಾರ ಉಚ್ಚಿಲದ ಮೊಗವೀರ ಸಭಾಭವನದಲ್ಲಿ ನಡೆಯ ಲಿದ್ದು, ಇದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಎ.16ರ ಬೆಳಿಗ್ಗೆ 10:30ಕ್ಕೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.