ಎ.17ರಂದು ಬೆಳ್ತಂಗಡಿ ನಗರದಲ್ಲಿ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ
ಬಿಜೆಪಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಹಿನ್ನೆಲೆ
Update: 2023-04-15 19:39 IST
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಎ.17ರಂದು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ನಗರದಲ್ಲಿ ಮಾರ್ಗ ಬದಲಾವಣೆಗಳನ್ನು ಮಾಡಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಎ.17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಬೆಳ್ತಂಗಡಿ ಪೇಟೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸುವಂತೆ ಹಾಗೂ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ವಾಹನಗಳು ಗುರುವಾಯನಕೆರೆಯಲ್ಲಿ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್ ನಲ್ಲಿ ಆದ್ರುಪೆರಾಲ್ ಮೂಲಕ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ರಸ್ತೆಯಲ್ಲಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸುವಂತೆಯೂ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.