×
Ad

ಚಿಕ್ಕಮಗಳೂರು: ಸಿ.ಟಿ.ರವಿ ಆಸ್ಪತ್ರೆಗೆ ದಾಖಲು

Update: 2023-04-16 12:45 IST

ಚಿಕ್ಕಮಗಳೂರು, ಎ.16: ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶನಿವಾರ ಸಂಜೆ ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಸಿ.ಟಿ.ರವಿ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಅಡ್ಮಿಟ್ ಆಗಿದ್ದಾರೆ.

ಮೂತ್ರಕೋಶದಲ್ಲಿ ಕಲ್ಲು ಕಾರಣ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದು, ಅವರಿನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Similar News