×
Ad

ಕೋಲಾರದಲ್ಲಿ ಕಾಂಗ್ರೆಸ್ 'ಜೈಭಾರತ್' ಸಮಾವೇಶ

Update: 2023-04-16 15:47 IST

ಕೋಲಾರ, ಎ.16: ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ನಾಲ್ಕು ಭರವಸೆಗಳನ್ನು ನೀಡಿದ್ದೇವೆ. ಇವೆಲ್ಲವೂ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮಾಡುತ್ತೇವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಕೋಲಾರದಲ್ಲಿ ಇಂದು ಆಯೋಜಿಸಿದ್ದ ಪಕ್ಷದ 'ಜೈಭಾರತ್' ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ತಿಂಗಳ ಪಡಿತರ ತಲಾ ಹತ್ತು ಕೆಜಿ ಅಕ್ಕಿ, ಗೃಹಿಣಿಯರಿಗೆ ತಿಂಗಳಿಗೆ ಎರಡು ಸಾವಿರ ರೂ., ನಿರುದ್ಯೋಗಿ ಯುವಕರಿಗೆ ತಿಂಗಳಿಗೆ ಮೂರು ಸಾವಿರ ರೂ., ಉಚಿತ ವಿದ್ಯುತ್ ನೀಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಇವೆಲ್ಲವೂ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮಾಡುತ್ತೇವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರೇ, ನೀವು ಶ್ರೀಮಂತರಿಗೆ ಲಕ್ಷಗಟ್ಟಲೆ ಕೋಟ್ಯಂತರ ರೂಪಾಯಿ ಕೊಟ್ಟಿರಿ. ನಾವು ಬಡವರಿಗಾಗಿ, ಯುವಕರಿಗಾಗಿ, ಮಹಿಳೆಯರಿಗೆ ನೀಡುತ್ತೇವೆ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮೊದಲಾದ ನಾಯಕರು ವೇದಿಕೆಯಲ್ಲಿದ್ದರು.

Similar News