ಐಪಿಎಲ್: ಮುಂಬೈ ಇಂಡಿಯನ್ಸ್‌ಗೆ 186 ರನ್ ಸವಾಲು ನೀಡಿದ ಕೆಕೆಆರ್
ವೆಂಕಟೇಶ್ ಅಯ್ಯರ್ ಚೊಚ್ಚಲ ಶತಕ
Update: 2023-04-16 17:34 IST
ಮುಂಬೈ, ಎ.16: ಅಗ್ರ ಸರದಿಯ ಬ್ಯಾಟರ್ ವೆಂಕಟೇಶ್ ಅಯ್ಯರ್ ಚೊಚ್ಚಲ ಶತಕದ(104 ರನ್, 51 ಎಸೆತ, 6 ಬೌಂಡರಿ, 9 ಸಿಕ್ಸರ್)ಬಲದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ರವಿವಾರ ನಡೆದ 22ನೇ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದೆ.
ಟಾಸ್ ಜಯಿಸಿದ ಮುಂಬೈನ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಕೆಕೆಆರ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಮುಂಬೈ ಬೌಲಿಂಗ್ ವಿಭಾಗದಲ್ಲಿ ಹೃತಿಕ್ ಶೋಕೀನ್ (2-34)ಯಶಸ್ವಿ ಪ್ರದರ್ಶನ ನೀಡಿದರು.
ಕೆಕೆಆರ್ ಆರಂಭಿಕ ಬ್ಯಾಟರ್ ನಾರಾಯಣ್ ಜಗದೀಶನ್(0)ವಿಕೆಟನ್ನು ಬೇಗನೆ ಕಳೆದುಕೊಂಡಿತು. ರಹಮಾನುಲ್ಲಾ ಗುರ್ಬಾಝ್(8) ಹಾಗೂ ನಾಯಕ ನಿತಿಶ್ ರಾಣಾ(5 ರನ್)ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.
ಆ್ಯಂಡ್ರೆ ರಸೆಲ್(ಔಟಾಗದೆ 21) ಹಾಗೂ ರಿಂಕು ಸಿಂಗ್(18 ರನ್) ಎರಡಂಕೆಯ ಸ್ಕೋರ್ ಗಳಿಸಿದರು.