ಸ್ಕೂಟರ್ ಪಲ್ಟಿ: ಗಾಯಾಳು ಸವಾರ ಮೃತ್ಯು
Update: 2023-04-16 21:05 IST
ಮಣಿಪಾಲ, ಎ.16: ಹತೋಟಿ ತಪ್ಪಿ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಅಶ್ಲೇಷ ಹೊಟೇಲ್ ಬಳಿ ನಡೆದಿದೆ.
ಮೃತರನ್ನು ಹೆರ್ಗಾ ಗ್ರಾಮದ ಈಶ್ವರ ನಗರದ ಉಮೇಶ್ ಶೆಣೈ(69) ಎಂದು ಗುರುತಿಸಲಾಗಿದೆ. ಇವರು ಎ.12ರಂದು ಸಂಜೆ ಸ್ಕೂಟರ್‌ನಲ್ಲಿ ಮನೆಯಿಂದ ಮಣಿಪಾಲದ ಕಡೆಗೆ ಹೋಗುತ್ತಿದ್ದು, ಈ ವೇಳೆ ಹತೋಟಿ ತಪ್ಪಿದ ಸ್ಕೂಟರ್ ರಸ್ತೆಗೆ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಇವರು, ಎ.15ರಂದು ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.