×
Ad

ಕಾಂಗ್ರೆಸ್ ನಾಯಕರೊಂದಿಗೆ ಜಗದೀಶ್ ಶೆಟ್ಟರ್ ಮಹತ್ವದ ಸಭೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ನಾಯಕರು ಭಾಗಿ

Update: 2023-04-16 23:22 IST

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಮುಖಂಡರೊಂದಿಗೆ ಪ್ರಮುಖ ಸಭೆ ನಡೆಸುತ್ತಿದ್ದಾರೆ. ನಗರದ ಸ್ಕೈ ಗಾರ್ಡನ್ ಅಪಾರ್ಟ್ಮೆಂಟ್ ಅಲ್ಲಿ ಹೈ ವೋಲ್ಟೇಜ್ ಸಭೆ ನಡೆಯುತ್ತಿದ್ದು, ಸತತ 2 ಗಂಟೆಯಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಸಿದ್ದರಾಮಯ್ಯ ಕೂಡಾ ಆಗಮಿಸಿದ್ದಾರೆ. ಸಿದ್ದರಾಮಯ್ಯ ಜೊತೆ ಝಮೀರ್ ಅಹ್ಮದ್ ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ. 

ಬಿಜೆಪಿ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ ರವಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್‌, ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಆದರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದೂ ಹೇಳಿದ್ದಾರೆ. 

Similar News