ಪತಿ ಮನೆಗೆ ಬಾರದ ಪತ್ನಿ: ವಿಚ್ಛೇದನ ಮಂಜೂರು ಆದೇಶ ಎತ್ತಿಹಿಡಿದ ಹೈಕೋರ್ಟ್
Update: 2023-04-16 23:51 IST
ಬೆಂಗಳೂರು: ಕೌಟುಂಬಿಕ ಪ್ರಕರಣವೊಂದರಲ್ಲಿ ಮದುವೆಯಾದ ಕೆಲವೇ ತಿಂಗಳಲ್ಲಿ ಪತಿಯನ್ನು ತೊರೆದು ತವರು ಮನೆ ಸೇರಿದ್ದ ಪತ್ನಿ ಮೂರು ವರ್ಷ ಕಳೆದರೂ ಹಿಂದಿರುಗದ ಅಂಶವನ್ನು ಪರಿಗಣಿಸಿ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಿಚ್ಛೇದನ ಮಂಜೂರು ಮಾಡಿ 2016ರಲ್ಲಿ ಕೋಲಾರದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ಕೌಟುಂಬಿಕ ನ್ಯಾಯಾಲಯದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪತ್ನಿಯ ಅರ್ಜಿ ವಜಾಗೊಳಿಸಿದೆ.