×
Ad

ಬಿ ಫಾರಂ ಪಡೆದ ನಿಖಿಲ್ ಕುಮಾರಸ್ವಾಮಿ: ದೇವೇಗೌಡರ ಮುಂದೆ ಕಣ್ಣೀರು

Update: 2023-04-17 12:56 IST

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಬಿ ಫಾರಂ ಪಡೆದರು. 

ಈ ವೇಳೆ ದೇವೇಗೌಡರ ಆರೋಗ್ಯ ಸ್ಥಿತಿ ಕಂಡು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟರು. ಬಿ ಫಾರಂ ಪಡೆಯುವ ವೇಳೆ ಎಚ್ ಡಿ ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಉಪಸ್ಥಿತರಿದ್ದರು.

2018ರಲ್ಲಿ ರಾಮನಗರ ಮತ್ತು ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದರು.ಈ ಹಿನ್ನೆಲೆಯಲ್ಲಿ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಚನ್ನಪಟ್ಟಣದಲ್ಲಿ ಶಾಸಕರಾಗಿ ಮುಂದುವರಿದಿದ್ದರು.

ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ  ರಾಮನಗರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಈ ಬಾರಿ ಅನಿತಾ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ನಿಖಿಲ್ ಅವರು ಸ್ಪರ್ಧಿಸಲಿದ್ದಾರೆ. 

Similar News