×
Ad

ಕನಕಪುರ: ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

Update: 2023-04-17 15:24 IST

ಕನಕಪುರ, ಎ.17: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್,​ ನಂತರ ಬೃಹತ್​ ಬೈಕ್​ ರ್‍ಯಾಲಿ ಹಾಗೂ ರೋಡ್​ಶೋ ನಡೆಸಿದರು. ಈ ವೇಳೆ ಕುಟುಂಬದ ಸದಸ್ಯರು ಸಾಥ್ ನೀಡಿದರು. 

''ರಾಜ್ಯದ ಜನರು ಮುಂಬರುವ ಕೆಲವೇ ದಿನಗಳಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಆಡಳಿತವನ್ನು ಬೇರು ಸಮೇತ ಕಿತ್ತೆಸೆಯಲಿದ್ದಾರೆ'' ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. 

Similar News