×
Ad

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸೋಮಣ್ಣ ನಾಮಪತ್ರ ಸಲ್ಲಿಕೆ; ಸಿಎಂ ಬೊಮ್ಮಾಯಿ ಸಾಥ್

Update: 2023-04-17 15:35 IST

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ನಂಜನಗೂಡು ತಾಲೂಕು ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು. 

ಇದಕ್ಕೂ ಮೊದಲು ನಂಜನಗೂಡು ಶ್ರೀಶ್ರೀಕಂಠೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗೋಳೂರು ಸರ್ಕಲ್ ನಿಂದ ತೆರೆದ ವಾಹನದಲ್ಲಿ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ತಾಲೂಕು ಕಚೇರಿಗೆ ಆಗಮಿಸಿದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ್ ಸಿಂಹ ಜೊತೆಗಿದ್ದರು.

ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೊ ಈ ಬಾರಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಹೇಳಿದರು.

ವರುಣಾ ಕ್ಷೇತ್ರ ಕೇವಲ ಮೈಸೂರು ಜಿಲ್ಲೆಯಲ್ಲಷ್ಟೇ ಪ್ರಸಿದ್ಧಿ ಪಡೆದಿತ್ತು. ವಿ.ಸೋಮಣ್ಣ ಬಿಜೆಪಿ ಅಭ್ಯರ್ಥಿಯಾದ ನಂತರ ರಾಜ್ಯದಲ್ಲಷ್ಟೇ ಅಲ್ಲದೆ ಭಾರತದಲ್ಲೂ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು.

ಒಬ್ಬ ವ್ಯಕ್ತಿ ಮತ್ತು ಆವರ ಪುತ್ರ ಕಳೆದ ಹದಿನೈದು ವರ್ಷದಿಂದ ಈ ಕ್ಷೇತ್ರವನ್ನು ಹಿಡಿದುಕೊಂಡಿದ್ದಾರೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Similar News