ಕಾಂಗ್ರೆಸ್ ನಿಂದ ಘೋಷಣೆಯಾಗದ ಟಿಕೆಟ್: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು, ಎ. 17: ವಿಧಾನಸಭಾ ಚುನಾವಣೆಯಲ್ಲಿ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಸೋಮವಾರ ಕ್ಷೇತ್ರದ ಹಿರಿಯ ಮುಖಂಡರು, ಬೆಂಬಲಿಗರು, ಅಭಿಮಾನಿಗಳೊಂದಿಗೆ ತೆರಳಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೂನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿಗೆ ಇನ್ನೂ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ರವಿವಾರ ತಡರಾತ್ರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜ್ಯ ವಿಧಾನಸಭಾ ಚುನಾವಣೆಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕ್ಷೇತ್ರದ ಹಿರಿಯ ಮುಖಂಡರು, ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು.#akandasrinivasamurthy #PULIKESHINAGAR #KarnatakaElection #election2023… pic.twitter.com/GKqgW5iHiA
— R. Akhanda Srinivas Murthy (@AkhandaSrinivas) April 17, 2023