ಜೆಡಿಎಸ್ ಶಾಸಕ ಗೌರಿಶಂಕರ್ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅಸ್ತು
ಬೆಂಗಳೂರು, ಎ.17: ಕಳೆದ 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ನಕಲಿ ವಿಮಾ ಬಾಂಡ್ ಹಂಚಿದ್ದ ಪ್ರಕರಣ ಸಂಬಂಧ ಈ ಬಾರಿಯ ಚುನಾವಣೆಯ ಸ್ಪರ್ಧೆಯಿಂದ ಹೊರಗುಳಿಯಲಿದ್ದಂತಹ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿ, ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದೆ. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ವಿರುದ್ಧ ನಕಲಿ ವಿಮಾ ಬಾಂಡ್ ವಿತರಣೆ ಪ್ರಕರಣ ದಾಖಲಾಗಿತ್ತು. ಬಿಜೆಪಿಯ ಅಭ್ಯರ್ಥಿಯಾಗಿದ್ದಂತಹ ಸುರೇಶ್ ಗೌಡ ದೂರು ನೀಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಸಿ.ಗೌರಿ ಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸೋಮವಾರ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿ, ಡಿ.ಸಿ.ಗೌರಿಶಂಕರ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್‍ಗೆ ಬಿಗ್ ರಿಲೀಫ್ ನೀಡಿದೆ.